Advertisement

ಎಸಿಬಿ ನೋಟಿಸ್‌ಗೂ, ಸರ್ಕಾರಕ್ಕೂ ಸಂಬಂಧವಿಲ್ಲ’

07:30 AM Aug 19, 2017 | Team Udayavani |

ಬೆಂಗಳೂರು: “ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಎಸಿಬಿ ಜಾರಿ ಮಾಡಿದ ನೋಟಿಸ್‌ಗೂ ಮತ್ತು ಸರ್ಕಾರಕ್ಕೂ ಯಾವುದೇ ಸಂಬಂಧ ವಿಲ್ಲ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಸ್ಪಷ್ಟಪಡಿಸಿದರು. ನಗರದ ಬೈಯಪ್ಪನಹಳ್ಳಿಯಲ್ಲಿ ಶುಕ್ರವಾರ ಡೆಮು ರೈಲು ಸೇವೆಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ 
ವಿರುದ್ಧ ಡಿನೋಟಿಫಿಕೇಶನ್‌ ಆರೋಪ ಇದೆ. ಆ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಹಾಗಾಗಿ, ಅವರ ವಿರುದ್ಧ ದಾಖಲಾದ ಎಫ್ಐಆರ್‌ಗೂ ಮತ್ತು ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

Advertisement

ಸಚಿವರಾದ ಡಿ.ಕೆ. ಶಿವಕುಮಾರ್‌ ಮತ್ತು ರಮೇಶ್‌ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಜಾರ್ಜ್‌, “ಕಾನೂನು ಎಲ್ಲರಿಗೂ ಸಮಾನ. ಯಾವುದೇ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಬಿಜೆಪಿ ನಾಯಕರು ಪ್ರಕರಣವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ತಕ್ಷಣ ಪ್ರತಿಭಟನೆ ಕೈಬಿಡಬೇಕು’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next