Advertisement

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

09:07 PM Mar 08, 2021 | Team Udayavani |

ಮಂಡ್ಯ : ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮಲೆಕ್ಕಿಗ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಮದ್ದೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಹನುಮಂತಪುರದ ಗ್ರಾಮ ಲೆಕ್ಕಿಗ ಚುಂಚಸ್ವಾಮಿ ಹುಲಿಗೆರೆಪುರ ಗ್ರಾಮದಲ್ಲಿ ಹೆಚ್ಚುವರಿ ಗ್ರಾಮ ಲೆಕ್ಕಿಗರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪೌತಿ ಖಾತೆ ಮಾಡಿಕೊಡುವಂತೆ  ಹುಲಿಗೆರೆಪುರ ಗ್ರಾಮದ ರೈತ ಕುಮಾರ್ ಎಂಬುವರು ಕಳೆದ ಮಾರ್ಚ್ ತಿಂಗಳಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಹಲವು ದಿನಗಳಿಂದಲೂ ಅಲೆದಾಡಿಸುತ್ತಿದ್ದ ಜತೆಗೆ ಹಣದ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಬೇಸತ್ತ ಕುಮಾರ್, ಗ್ರಾಮ ಲೆಕ್ಕಿಗ ಚುಂಚಸ್ವಾಮಿ ವಿರುದ್ಧ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಸಂಬAಧ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮಲೆಕ್ಕಿಗ ಚುಂಚಸ್ವಾಮಿ ಅವರು ರೈತ ಕುಮಾರ್‌ನಿಂದ 3 ಸಾವಿರ ರೂ .ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಚುಂಚಸ್ವಾಮಿ ಅವರನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next