ಬೆಳಗಾವಿ: ಅತಿವೃಷ್ಠಿಯಿಂದ ಕುಸಿದ ಮನೆಯನ್ನು ಪರಿಹಾರಕ್ಕಾಗಿ ಬಿ ಕೆಟೆಗರಿಗೆ ಸೇರಿಸಲು ಸಂತ್ರಸ್ತನಿಂದ ಲಂಚ ಪಡೆಯುತ್ತಿದ್ದ ಮೂಡಲಗಿ ತಾಲೂಕಿನ ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಅಶೋಕ ತಳವಾರ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ. ೧೫ ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದು, ಮೂಡಲಗಿಯ ತಹಶೀಲ್ದಾರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಅತಿವೃಷ್ಠಿಗೆ ಕುಸಿದ ಮನೆಯ ವಿವರಗಳನ್ನು ಪರಿಹಾರಕ್ಕಾಗಿ ‘ಬಿ’ ಕೆಟೆಗರಿಗೆ ಸೇರಿಸಲು ಅರಭಾವಿ ತೋಟದ ಪ್ರವಾಹ ಸಂತ್ರಸ್ತ ಆನಂದ ಧರ್ಮಟ್ಟಿ ಎಂಬವರಿದ ೩೦ ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದನು. ಈ ಬಗ್ಗೆ ಎಸಿಬಿಯಲ್ಲಿ ಆನಂದ ದೂರು ದಾಖಲಿಸಿದ್ದರು.
ಇದನ್ನೂ ಓದಿ:ಪ್ರತಿಭಟನಾ ನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಿರುವುದು ಕ್ರೂರತನ : ಶಿವಸೇನೆ ಆಕ್ರೋಶ
ಎಸಿಬಿ ಎಸ್‌ಪಿ ಬಿ.ಎಸ್. ನೇಮಗೌಡರ, ಡಿವೈಎಸ್ಪಿ ವೇಣುಗೋಪಾಲ ಮಾರ್ಗದರ್ಶನದಲ್ಲಿ ಇನ್ಸಪೆಕ್ಟರ್‌ಗಳಾದ ಎ.ಎಸ್. ಗುದಿಗೊಪ್ಪ, ಸುನಿಲಕುಮಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.