Advertisement

ಕೆಎಎಸ್ ಅಧಿಕಾರಿ ಸುಧಾಗೆ ಮತ್ತೆ ಎಸಿಬಿ ಶಾಕ್! ಬೆಂಗಳೂರಿನ 9 ಕಡೆ ಎಸಿಬಿ ದಾಳಿ

08:14 AM Nov 24, 2020 | keerthan |

ಬೆಂಗಳೂರು: ಕೆಎಎಸ್ ಅಧಿಕಾರಿ ಸುಧಾ ಗೆ ಮತ್ತೆ ಎಸಿಬಿ ಶಾಕ್ ನೀಡಿದ್ದು, ಸುಧಾ ಆಪ್ತರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಮಂಗಳವಾರ ಬೆಳಿಗ್ಗೆ ಒಟ್ಟು ಒಂಬತ್ತು ಕಡೆಗಳಲ್ಲಿ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಇಂದು ಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ ಮನೆಗಳು ಸೇರಿ ಒಟ್ಟು ಒಂಭತ್ತು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಜನವರಿ ಬಳಿಕವೇ ಶಾಲೆ ? ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ನಿರ್ಧಾರ

ನವೆಂಬರ್ 7ರಂದು ಸುಧಾ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಂಗಳೂರು, ಉಡುಪಿ ಸೇರಿದಂತೆ ಹಲವೆಡೆ ದಾಳಿ ನಡೆಸಿ ಮಹತ್ವದ ದಾಖಲೆಗಳು, ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದರು.

ಇಂದು ಬೆಳಗ್ಗೆ ಮತ್ತೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಎಎಸ್ ಅಧಿಕಾರಿಗೆ ಮತ್ತೊಮ್ಮೆ ಶಾಕ್ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next