ಗದಗ: ಸಾರಿಗೆ ಸಂಸ್ಥೆಯ ನೌಕರರ ಗ್ರಾಚ್ಯುಟಿ ಹಣ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಕಚೇರಿ ಲೆಕ್ಕ ಅಧೀಕ್ಷಕ ಸೆರಿದಂತೆ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗೀಯ ಕಚೇರಿ ಲೆಕ್ಕ ಅಧೀಕ್ಷಕ ಜಗದೀಶ್ ಹಲವಾಗಲಿ, ಕಚೇರಿ ಸಹಾಯಕ ಈರಣ್ಣ ಎಲಿಬಳ್ಳಿ ಅವರು ಬಂಧನಕ್ಕೊಳಗಾಗಿದ್ದಾರೆ.
ನೌಕರನ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಲು ಹತ್ತು ಸಾವಿರ ರೂ. ಲಂಚಕ್ಕಾಗಿ ಬೇಡಿಕೆ ಇದ್ದರು. ಅದರಲ್ಲಿ ಮೊದಲ ಕಂತಿನಲ್ಲಿ ಏಳು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.
ಇದನ್ನೂ ಓದಿ:ಕಾರು ಢಿಕ್ಕಿಯಾಗಿ ನಾಲ್ವರು ಸ್ವಿಗ್ಗಿ ಡೆಲಿವರಿ ಏಜೆಂಟ್‌ಗಳ ದುರ್ಮರಣ
ದಾಳಿಯಲ್ಲಿ ಎಸಿಬಿ ಎಸ್‌ಪಿ ಬಿ.ಎಸ್.ನೇಮಗೌಡ ಅವರ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಎಂ.ವಿ.ಮಲ್ಲಾಪುರ ನೇತೃತ್ವದಲ್ಲಿ ಸಿಸಿಪಿ ಆರ್.ಎಫ್.ದೇಸಾಯಿ, ವಿ.ಎಂ.ಹಳ್ಳಿ, ಸಿಬ್ಬಂದಿಗಳಾದ ಎಂ.ಎಂ.ಅಯ್ಯನಗೌಡರ್, ವಿಶ್ವನಾಥ್, ವಿರೇಶ್ ಜೋಳದ, ಎನ್.ಎಸ್.ತಾಯಣ್ಣವರ್, ಮಂಜು ಮುಳಗುಂದ, ಶರೀಫ್ ಮುಲ್ಲಾ, ನಾರಾಯಣ ರೆಡ್ಡಿ ಸಿಬ್ಬಂದಿ ದಾಳಿ ನಡೆಸಿದ್ದಾರೆ.