ಗುಂಡ್ಲುಪೇಟೆ (ಚಾಮರಾಜನಗರ): ಗುಂಡ್ಲುಪೇಟೆ ಅಬಕಾರಿ ನಿರೀಕ್ಷಕ ಚೆಲುವರಾಜು ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಗುಂಡ್ಲುಪೇಟೆ ಕಚೇರಿ ಸೇರಿದಂತೆ ಎರಡು ಕಡೆ, ಮೈಸೂರು ಮನೆ, ಚನ್ನರಾಯಪಟ್ಟಣ, ಮಂಡ್ಯ, ಬೆಂಗಳೂರು ಸೇರಿದಂತೆ ಏಕಕಾಲದಲ್ಲಿ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಜೊತೆಗೆ ಚಾಮರಾಜನಗರದ ಭ್ರಮರಾಂಬ ಬಡಾವಣೆಯಲ್ಲಿರುವ ಆತನ ಸ್ನೇಹಿತನ ನಿವಾಸದ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲಾತಿ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕ್ರೂಸರ್ 5 ಸಾವು; 7 ಜನರಿಗೆ ಗಾಯ
ಅಬಕಾರಿ ನಿರೀಕ್ಷಕ ಚೆಲುವರಾಜು ವಿರುದ್ಧ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಚಾಮರಾಜನಗರ ಎಸಿಬಿ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ್ ಹಾಗೂ ಇನ್ಸ್ ಪೆಕ್ಟರ್ ಕಿರಣ್ ನೇತೃತ್ವದಲ್ಲಿ 40 ಮಂದಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸಂಜೆವರೆಗೂ ಶೋಧ ಕಾರ್ಯ ನಡೆಯಲಿದೆ ಎನ್ನಲಾಗಿದೆ. ಅಕ್ರಮ ಆಸ್ತಿ ಗಳಿಕೆ, ನಗದು ಸೇರಿದಂತೆ ಇನ್ನಿತರ ಯಾವುದೇ ವಿಚಾರದ ಬಗ್ಗೆ ಮಾಹಿತಿ ಸ್ಪಷ್ಟವಾಗಿ ತಿಳಿದು ಬಂದಿಲ್ಲ.