Advertisement

ವಿಜಯಪುರ ಹೆಸ್ಕಾಂ ಎಇಇ ಸಿದ್ದರಾಮ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ; ದಾಖಲೆ ಪರಿಶೀಲನೆ

10:08 AM Jul 15, 2021 | Team Udayavani |

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರದಲ್ಲಿರುವ ಕೆಪಿಟಿಸಿಎಲ್ ಎಇಇ ಮನೆ ಮೇಲೆ ದಾಳಿ ನಡೆಸಿದ್ದಾರೆ.

Advertisement

ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಎಂಬ  ಕೆಪಿಟಿಸಿಎಲ್ ಕಚೇರಿಯ ಎಇಇ ಮನೆ ಮೇಲೆ ದಾಳಿ ನಡೆಸಿದ್ದಾರೆ.

ವಿಜಯಪುರ ನಗರದ ಸುಕೂನ್ ಲೇಔಟ್ ನಲ್ಲಿರುವ ಕೆಪಿಟಿಸಿಎಲ್ ಎಇಇ ಸಿದ್ದರಾಮ ಬಿರಾದಾರಗೆ ಸೇರಿದ ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ, ಬಿ.ಕೆ.ಲೋಣಿ ಗ್ರಾಮದ‌ ಮನೆ, ತೋಟದ ಮನೆ ಮಾತ್ರವಲ್ಲದೇ  ಸಿದ್ದರಾಮ ಅಳಿಯ ಅರ್ಜುನ ಬಿರಾದಾರ್ ಮನೆ ಮೇಲೂ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು, ದಾಖಲೆ ಪರಿಶೀಲನೆ ಮುಂದುವರೆಸಿದ್ದಾರೆ.

ಎಸಿಬಿ ಡಿಎಸ್ಪಿ  ಮಂಜುನಾಥ ಗಂಗಲ್ ನೇತೃತ್ವದಲ್ಲಿ ವಿಜಯಪುರ ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಎಸಿಬಿ‌ ಇನ್ಸಪೆಕ್ಟರ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next