Advertisement
ನೂತನ ತನಿಖಾಧಿಕಾರಿಯಾಗಿ ಬೆಳ್ಳಿಯಪ್ಪ ಕೆ.ಯು. ಅವರನ್ನು ನೇಮಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಆದೇಶಿಸಿದ್ದಾರೆ. ತನಿಖಾ ತಂಡದಲ್ಲಿ ಮಹಿಳಾ ಪಿಎಸ್‌ಐಗಳನ್ನು ಒಳಗೊಂಡ ಸಿಬಂದಿ ಇರಲಿದ್ದಾರೆ.
ತನಿಖಾಧಿಕಾರಿಯಾಗಿ ನೇಮಕಗೊಂಡ ಬಳಿಕ ಬೆಳ್ಳಿಯಪ್ಪ ಅವರು ಘಟನೆ ನಡೆದ ಕಾಲೇಜಿಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದುಕೊಂಡರು. ಸಿಸಿಟಿವಿ ದೃಶ್ಯಾವಳಿಗಳ ಸಹಿತ ಈ ಹಿಂದಿನ ತನಿಖಾಧಿಕಾರಿ ಮೂಲಕ ವಿವರ ಪಡೆದುಕೊಂಡರು. ಈಗಾಗಲೇ ಐಜಿ ಡಾ| ಚಂದ್ರಗುಪ್ತ ಅವರು ಘಟನೆಯ ಬಗ್ಗೆ ಪೂರ್ಣ ವಿವರ ಪಡೆದುಕೊಂಡಿದ್ದಾರೆ.
Related Articles
ಸಂತ್ರಸ್ತ ವಿದ್ಯಾರ್ಥಿನಿಯರ ಸಹಿತ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ವಿದ್ಯಾರ್ಥಿನಿಯರನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಬಳಿಕ ಅವರ ಹೇಳಿಕೆಗಳನ್ನು ದಾಖಲಿಸಲಾಯಿತು. ಘಟನೆ ನಡೆದ ಸ್ಥಳ ಸಹಿತ ಕಾಲೇಜಿನ ಸಿಬಂದಿ ವಿಚಾರಣೆಗೊಳಪಡಿಸಲಾಯಿತು. ಈಗಾಗಲೇ ವಿದ್ಯಾರ್ಥಿನಿಯರ ಮೂರು ಐಫೋನ್‌ಗಳನ್ನು ಎಫ್ಎಸ್‌ಎಲ್ ವರದಿಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಇದರ ವರದಿ ಆಧಾರದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎನ್ನುತ್ತವೆ ಪೊಲೀಸ್ ಮೂಲಗಳು.
Advertisement
ಅಶ್ಲೀಲ ಸಂದೇಶ: ಪ್ರಕರಣ ದಾಖಲುಉಡುಪಿ: ಉಡುಪಿಯ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಭಟನೆಯೊಂದರಲ್ಲಿ ಹೇಳಿಕೆ ನೀಡಿದ್ದ ಕಾಲೇಜಿನ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜು. 28ರಂದು ಇನ್‌ಸ್ಟಾಗ್ರಾಂನಲ್ಲಿ ಒಜಿಜrಙಇಟಚಿrಚ ಖಾತೆಯಿಂದ ವಿದ್ಯಾರ್ಥಿನಿಗೆ ಭಯಪಡಿಸುವ ರೀತಿಯಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಆಕೆಯ ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಲಾಗಿದೆ ಎಂದು ನೊಂದ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.