Advertisement
ಗುರುವಾರ ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ ಯಿಂದ ಸಾಕಷ್ಟು ಹಾನಿಯಾಗಿದ್ದು, ಅಧಿಕಾರಿಗಳು ಪರಿಹಾರ ಕಾರ್ಯ ಕೈಗೊಳ್ಳಬೇಕಿದೆ. ಜತೆಗೆ ಡಿ.14ಕ್ಕೆ ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಇದೆ. ಬಳಿಕ ಇದೇ ತಿಂಗಳಲ್ಲಿ ಪುರಸಭೆ ಹಾಗೂ ಪ.ಪಂ.ಗಳ ಚುನಾವಣೆಯೂ ನಡೆಯಲಿದೆ. ಬೆಳಗಾವಿ ಜಿಲ್ಲಾಡಳಿತದ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.
ಈ ಬಾರಿಯ ಅಧಿವೇಶನದಲ್ಲಿ ವಿದ್ಯಾರ್ಥಿಗಳಿಗೆ ವೀಕ್ಷಣೆಗೆ ಅವಕಾಶ ಇಲ್ಲ. ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ ಎಂದರು. ಸಲ್ಲಿಕೆಯಾಗದ ಮಸೂದೆ
ಕಲಾಪಗಳು ಎಂದಿನಂತೆ ನಡೆಯಲಿವೆ. ಆದರೆ ಅಧಿವೇಶನದಲ್ಲಿ ಮಂಡಿಸಲು ಸರಕಾರದಿಂದ ಇದು ವರೆಗೆ ಯಾವುದೇ ಬಿಲ್ (ಮಸೂದೆ) ಸಲ್ಲಿಕೆಯಾಗಿಲ್ಲ. ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದೆ ಎಂದರು.
Related Articles
Advertisement
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಬೆಳಗಾವಿಯಲ್ಲಿ ಅಧಿವೇಶನದ ವೇಳೆ ವಸತಿ ವ್ಯವಸ್ಥೆಗೆ ವೆಚ್ಚ ಮಾಡಿದ್ದನ್ನು ನೋಡಿದರೆ ಈ ಹಣದಲ್ಲಿ ಶಾಸಕರ ಭವನ ನಿರ್ಮಾಣವಾಗುತ್ತಿತ್ತು. ಇಲ್ಲಿ ಶಾಸಕರ ಭವನದ ನಿರ್ಮಾಣದ ಅಗತ್ಯವಿದೆ. ಮತ್ತೂಮ್ಮೆ ಮುಖ್ಯ ಮಂತ್ರಿಯನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.
ಶಾಸಕರು ಹದ್ದು ಮೀರಿದರೆ ಕಠಿನ ಕ್ರಮಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ನಡೆಯುತ್ತಿರುವ ಘಟನೆಗಳು ನನಗೆ ತೀವ್ರ ನೋವು ತಂದಿವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಶಕ್ತಿ ತುಂಬಬೇಕಾದವರೇ ಶಿಸ್ತು ಉಲ್ಲಂಘನೆ ಮಾಡುವುದು ಸರಿಯಲ್ಲ. ಈ ನಿಟ್ಟಿನಲ್ಲಿ ರಾಜ್ಯಸಭೆಯ 12 ಸಂಸದರ ಅಮಾನತು ಸರಿಯಾದ ಕ್ರಮವಾಗಿದೆ. ಕಳೆದ ಲೋಕಸಭಾ ಅಧಿವೇಶನದಲ್ಲಿ ನಡೆದ ಘಟನೆ ಖಂಡಿಸಿ ಪತ್ರ ಬರೆದಿದ್ದೆ. ರಾಜ್ಯಸಭೆಯಲ್ಲೇ ಈ ರೀತಿ ಘಟನೆ ನಡೆದರೆ ವಿಧಾನಸಭೆಯಲ್ಲಿ ಹೇಗೆ ನಡೆಯಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದೆ. ನಮ್ಮ ನಡವಳಿಕೆಗಳು ಸದನದ ಚೌಕಟ್ಟಿನಲ್ಲಿರಬೇಕು. ಚರ್ಚೆಗಳು ರಚನಾತ್ಮಕವಾಗಿರಬೇಕು. ನಿಯಮ ಮೀರಿ ವರ್ತನೆ ಮಾಡಿದರೆ ನಾವು ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಕಠಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪೀಕರ್ ಕಾಗೇರಿ ಅವರು ಶಾಸಕರಿಗೆ ಎಚ್ಚರಿಕೆ ನೀಡಿದರು.