Advertisement
ಎಡಿಸಿ ಎಂ.ಪಿ. ಮಾರುತಿ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ರಾಷ್ಟ್ರೀಯ ಏಕತಾ ದಿವಸ್ ನಿಮಿತ್ತ ಪ್ರತಿಜ್ಞಾವಿಧಿ ಬೋಧಿಸಿ, ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನಮ್ಮನ್ನುಅರ್ಪಿಸಿಕೊಳ್ಳುತ್ತೇವೆ. ನಮ್ಮ ದೇಶ ಬಾಂಧವರಲ್ಲಿ ಈ ಸಂದೇಶ ಸಾರಲು ಶ್ರಮಿಸುತ್ತೇವೆ. ಸರ್ದಾರ್ ವಲ್ಲಭಬಾಯಿ ಪಟೇಲ್‌ರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುವುದಾಗಿ ಪ್ರಮಾಣ ಮಾಡುತ್ತೇವೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಮ್ಮದೇ ಆದ ಕೊಡುಗೆ ನೀಡುತ್ತೇವೆಂದು ಎಲ್ಲ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಮಾಡುವುದಿಲ್ಲ. ಧರ್ಮ, ಜಾತಿ, ಭಾಷೆ, ಪ್ರಾಂತ ಮುಂತಾದ ವಿಷಯಗಳಲ್ಲದೇ ರಾಜಕೀಯ ಹಾಗೂ ಸಂವಿಧಾನಾತ್ಮಕವಾಗಿ ಇತ್ಯರ್ಥ ಮಾಡಲು ಪ್ರಯತ್ನಿಸಲಾಗುವುದು. ಭಾರತೀಯ ಪ್ರಜೆಯಾದ ನಾವು ನಮ್ಮ ದೇಶದ ಪರಂಪರಾಗತ ಮೌಲ್ಯವಾದ ಅಹಿಂಸೆ ಮತ್ತು ತಾಳ್ಮೆಯಲ್ಲಿ ಅಪಾರ ನಂಬಿಕೆ ಇರಿಸಿದ್ದು, ಎಲ್ಲ ರೀತಿಯ ಭಯೋತ್ಪಾದನೆ ಮತ್ತು ಹಿಂಸಾಕೃತ್ಯಗಳನ್ನು ವಿರೋಧಿ ಸುತ್ತೇವೆ. ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ತಿಳಿವಳಿಕೆಯಿಂದ, ಸಾಮಾಜಿಕ ಬಾಂಧವ್ಯ ಹಾಗೂ ಒಡನಾಡಿಗಳ ಜೊತೆಗೂಡಿ ಮಾನವ ಜೀವ ಹಾಗೂ ಮೌಲ್ಯಗಳನ್ನು ನಾಶಪಡಿಸುವ ವಿನಾಶಕಾರಿ ಶಕ್ತಿಗಳ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞಾವಿಧಿ ಬೋಧಿ ಸಲಾಯಿತು. ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ರಾಷ್ಟ್ರೀಯ ಸಂಕಲ್ಪ ದಿವಸ್ ಹಾಗೂ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.