Advertisement

ಸರಸ್ವತಿ ಪೂಜೆಗೆ ಸಮ್ಮತಿ!

01:15 AM Feb 08, 2019 | |

ಕೊಚ್ಚಿ: ಕೇರಳದ ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯಲ್ಲಿ ಸರಸ್ವತಿ ಪೂಜೆ ಮಾಡಲು ವಿದ್ಯಾರ್ಥಿಗಳ ಬೇಡಿಕೆಗೆ ಕೊನೆಗೂ ಆಡಳಿತ ಮಂಡಳಿ ಸಮ್ಮತಿಸಿದೆ. ಅಳಪ್ಪುಳ ಕ್ಯಾಂಪಸ್‌ನಲ್ಲಿ ಸರಸ್ವತಿ ಪೂಜೆ ಮಾಡಲು ನಿರಾಕರಿಸಲಾಗಿತ್ತು. ಇದರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಫೆ.9, 10 ಮತ್ತು 11 ರಂದು ಪೂಜೆ ನಡೆಸಲು ವಿದ್ಯಾರ್ಥಿಗಳು ನಿರ್ಧರಿಸಿದ್ದು, ಅನುಮತಿ ಕೇಳಿದಾಗ, ಶೈಕ್ಷಣಿಕ ಸಂಸ್ಥೆಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗದು ಎಂದು ಆಡಳಿತ ಮಂಡಳಿ ಹೇಳಿತ್ತು. ಇದರ ವಿರುದ್ಧ ಉತ್ತರ ಭಾರತದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕುಲಪತಿ ಹಾಗೂ ರಿಜಿಸ್ಟ್ರಾರ್‌ ಸಭೆ ನಡೆಸಿ ಸಮ್ಮತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next