ಅಮರಾವತಿ: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಸಿನೆಮಾ ಪುಷ್ಪ-2 ಬಿಡುಗಡೆಗೆ ಪ್ರೇಕ್ಷಕರು ಕಾಯುತ್ತಿರುವ ನಡುವೆಯೇ, ಸಿನಿ ತಂಡದ ಹಲವು ಕಲಾವಿದರು ತೆಲಂಗಾಣದಲ್ಲಿ ರಸ್ತೆ ಅಪಘಾತಕ್ಕೀಡಾಗಿರುವ ಘಟನೆ ವರದಿಯಾಗಿದೆ. ನಲಗೊಂಡಜಿಲ್ಲೆಯ ನರಕೇಟಪಲ್ಲಿಯಲ್ಲಿ ತಾಂತ್ರಿಕ ದೋಷದಿಂದ ಬಸ್ ಒಂದನ್ನು ನಿಲ್ಲಿಸಲಾಗಿತ್ತು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಕಲಾವಿದರಿದ್ದ ಬಸ್, ನಿಂತಿರುವ ಬಸ್‌ಗೆ ಢಿಕ್ಕಿ ಹೊಡೆದಿದೆ. ಚಿತ್ರೀಕರಣಕ್ಕೆಂದು ತೆರಳಿದ್ದ ಕಲಾವಿದರ ಪೈಕಿ, ಹಲವರು ಅಪಘಾತದಲ್ಲಿ ತೀವ್ರವಾಗಿ ಗಾಯ ಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಕುರಿತಂತೆ ಚಿತ್ರತಂಡ ಸದ್ಯ ಯಾವುದೇ ಮಾಹಿತಿ ನೀಡಿಲ್ಲ.
Advertisement
Accident: ಪುಷ್ಪ-2 ಸಿನಿ ತಂಡಕ್ಕೆ ಅಪಘಾತ
11:21 PM May 31, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.