Advertisement
ಮೃತಪಟ್ಟವರು: ಬೋರಾಪುರದಿಂದ ಚಿಕ್ಕರಸಿನಕೆರೆಗೆ ಬಳೆ ವ್ಯಾಪಾರ ಮಾಡಲು ಬೈಕ್‌ನಲ್ಲಿ ಬರುತ್ತಿದ್ದ ಕಾವ್ಯಾ(16), ರಕ್ಷಿತಾ(18) ಮೃತ ದುರ್ಧೈವಿಗಳು.
Related Articles
Advertisement
ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಆಸ್ಪತ್ರೆ ವೈದ್ಯಾಧಿಕಾರಿಗಳು ಶವಗಳನ್ನು ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ಶಾಸಕರ ಸಾಂತ್ವನ; ಕುಟುಂಬಕ್ಕೆ ತಲಾ 20 ಸಾವಿರ ರೂ. ನೆರವು : ಭಾರತೀನಗರ: ಇಲ್ಲಿಗೆ ಸಮೀಪದ ಛತ್ರದ ಹೊಸಹಳ್ಳಿ ಗೇಟ್‌ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟವರ ಕುಟುಂಬದವರಿಗೆ ಶಾಸಕ ಡಿ.ಸಿ.ತಮ್ಮಣ್ಣ ಸಾಂತ್ವನ ಹೇಳಿದರು. ಭಾರತೀನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಡಿ.ಸಿ.ತಮ್ಮಣ್ಣ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಮೃತರ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ತಲಾ 20 ಸಾವಿರ ರೂ. ಪರಿಹಾರ ನೀಡಿದರು.
ನಂತರ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ. ವಾಹನ ಸವಾರರು ಅತಿವೇಗವಾಗಿ ವಾಹನ ಚಲಾಯಿಸುತ್ತಿರು ವುದೇ ಸಾವಿಗೆ ಕಾರಣ ಎಂದು ಹೇಳಿದರು.
ಮುಗಿಲು ಮುಟ್ಟಿದ್ದ ಪೋಷಕರ ಆಕ್ರಂದನ: ಕುಟುಂಬಕ್ಕೆ ಆಧಾರವಾಗಿದ್ದ ಮಕ್ಕಳಾದ 16 ವರ್ಷದ ಕಾವ್ಯಾ, 18 ವರ್ಷದ ರಕ್ಷಿತಾ ಅವರು ಸ್ಥಳದಲ್ಲೇ ಮೃತಪಟ್ಟಿರುವುದರಿಂದ ಕುಟುಂಬಸ್ಥರು ಆತಂಕಕ್ಕೀಡಾಗಿದ್ದಾರೆ. ಕಾವೇರಯ್ಯ ಅವರೂ ತೀವ್ರವಾಗಿ ಗಾಯಗೊಂಡು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ನಾವು ನೊಂದ ಕುಟುಂಬದ ಜತೆ ಸದಾ ಇರುತ್ತೇವೆ ಎಂದು ಶಾಸಕರು ಭರವಸೆ ನೀಡಿದರು. ಈ ವೇಳೆ ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.