ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ಮರಳುತ್ತಿದ್ದ ಚಿಂತಾಮಣಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿ ಮತ್ತು ಹೊರಗುತ್ತಿಗೆ ಸಿಬ್ಬಂದಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಪಿಂಡಪಾಪನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಚಿಂತಾಮಣಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿ ವಿನಯ್ ಹಾಗೂ ಸಿಬ್ಬಂದಿ ಲೋಕೇಶ್ ಮೃತಪಟ್ಟಿದ್ದಾರೆ ಇವರಿಬ್ಬರು ಚಿಕ್ಕಬಳ್ಳಾಪುರ ತಾಲೂಕಿನ ಎಸ್.ಗೊಲ್ಲಹಳ್ಳಿಯಲ್ಲಿ ಆಯೋಜಿಸಿದ್ದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಡ್ಲಘಟ್ಟ ಮಾರ್ಗದ ಮೂಲಕ ಚಿಂತಾಮಣಿ ತಾಲೂಕಿಗೆ ಮರಳುತ್ತಿದ್ದ ವೇಳೆಯಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದೆ ಇದರಿಂದ ಇಬ್ಬರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಬಿರುಗಾಳಿ ಮಳೆಗೆ ಧರೆಗುರುಳಿದ ಮರ, ಇಬ್ಬರು ಗಂಭೀರ, 5೦ಕ್ಕೂ ಹೆಚ್ಚು ವಾಹನಗಳು ಜಖಂ
ವಿಷಯ ತಿಳಿದ ಕೂಡಲೇ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸಹಾಯಕ ಕೃಷಿ ಅಧಿಕಾರಿ ಮತ್ತು ಸಿಬ್ಬಂದಿಯ ಮೃತದೇಹಗಳನ್ನು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.