Advertisement

ಗದಗ: ಬಸ್ -ಬೈಕ್ ನಡುವೆ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ

01:26 PM Aug 24, 2022 | Team Udayavani |

ಗದಗ: ಬಸ್- ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಹಿಂಬದಿ ಸವಾರ ಸಾವಿಗೀಡಾಗಿ, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಹೊಂಬಳ ಗದಗ ರಸ್ತೆಯಲ್ಲಿ ಬುಧವಾರ ನಡೆದಿದೆ.

Advertisement

ತಾಲೂಕಿನ ಲಿಂಗದಾಳ ಗ್ರಾಮದ ಹನುಮಂತಪ್ಪ ಚಲವಾದಿ(47) ಮೃತಪಟ್ಟಿದ್ದಾರೆ. ಬೈಕ್ ಸವಾರರು ಲಿಂಗದಾಳ ಗ್ರಾಮದಿಂದ ಗದಗ ನಗರಕ್ಕೆ ಹಾಗೂ ಗದಗದಿಂದ ಹೊಂಬಳ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ನ ಚಕ್ರದಡಿ ಸಿಲುಕಿದ ಬೈಕ್ ಹಿಂಬದಿ ಸವಾರ ಮೃತಪಟ್ಟರೆ, ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದ ಗುಂಡಿಗೆ ಉರುಳಿದೆ.

ಇದನ್ನೂ ಓದಿ: ಬೈಕ್‌ ಗೆ ಟಿಪ್ಪರ್‌ ಲಾರಿ ಢಿಕ್ಕಿ: ದಂಪತಿ ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬೈಕ್ ಚಲಾಯಿಸುತ್ತಿದ್ದ ರೋಹಿತ್ ಚಲವಾದಿ ಹಾಗೂ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು

Advertisement

Udayavani is now on Telegram. Click here to join our channel and stay updated with the latest news.

Next