Advertisement

ಕಾರ್ಕಳ: ಕಾರು – ರಿಕ್ಷಾ ಭೀಕರ ಅಪಘಾತ; ಆಟೋ ಚಾಲಕ ಸಾವು,ಓರ್ವ ಗಂಭೀರ

12:23 PM Jan 26, 2022 | Team Udayavani |

ಕಾರ್ಕಳ:  ಕಾರು ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿಯ್ಯಾರು ಚರ್ಚಿನ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

Advertisement

ಘಟನೆಯಲ್ಲಿ ಆಟೋ ಚಾಲಕ ಚಂದ್ರಶೇಖರ ಸಾವನ್ನಪ್ಪಿದ್ದು,ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next