Advertisement

ಪಾಂಗಾಳ‌‌ ಸೇತುವೆಯಲ್ಲಿ ಮೀನಿನ ಟೆಂಪೋ ಪಲ್ಟಿ

11:59 AM Jul 12, 2022 | Team Udayavani |

ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೀನಿನ‌ ಟೆಂಪೋ ಮಗುಚಿ ಬಿದ್ದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

Advertisement

ಉಡುಪಿಯಿಂದ‌ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ‌ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ‌ ಪಾರಾಗಿದ್ದಾನೆ.

ಘಟನೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು‌ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

ಇದನ್ನೂ ಓದಿ:ಕೇರಳ: ಪಯ್ಯನೂರಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ 

Advertisement

ಘಟನೆ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸತು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next