Advertisement

ಆಲೂರು: ಕ್ಯಾಂಟರ್‌ –ಕಾರು ಢಿಕ್ಕಿ; ಧರ್ಮಸ್ಥಳಕ್ಕೆ ಹೂರಟಿದ್ದ ತಂದೆ,ಮಗ ದಾರುಣ ಸಾವು

01:15 PM Jun 19, 2022 | Team Udayavani |

ಆಲೂರು: ಕ್ಯಾಂಟರ್‌ – ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲೂರು-ಈಶ್ವರಹಳ್ಳಿ ಕೂಡಿಗೆ ಸಮೀಪ  ನಡೆದಿದೆ.

Advertisement

ತಮಿಳುನಾಡು ಮೂಲದ ಅಂಜನಪ್ಪ (40), ಕಾರ್ತಿಕ್ (17) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. 2 ಕಾರಿನಲ್ಲಿ ಒಟ್ಟು 10 ಜನ ಧರ್ಮಸ್ಥಳಕ್ಕೆಂದು ತೆರಳುತ್ತಿದ್ದರು. ಈ ವೇಳೆ ಮಾರುತಿ 800 ಕಾರಿಗೆ ಕ್ಯಾಂಟರ್‌ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇನ್ನುಳಿದಂತೆ ಘಟನೆಯಲ್ಲಿ ಮೂವರಿಗೆ  ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಆಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆಲೂರು ವೃತ್ತ ನಿರೀಕ್ಷಕ ಹೇಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next