ಬಂಟ್ವಾಳ: ಮುಖಾಮುಖಿ ಢಿಕ್ಕಿ ಸಂಭವಿಸಿ, ಕಾರು ಚಾಲಕ ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಜುಲೈ 1 ರ ಮಧ್ಯ ರಾತ್ರಿ ಸುಮಾರು 12 ಗೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಡೆದಿದೆ.
ನಯನಾಡು ನಿವಾಸಿ ಬ್ಯಾಪ್ಟಿಸ್ ಲೊಬೊ ಅವರ ಮಗ ಚಾಲಕ ರಾಕ್ ಲಿನ್ ಲೋಬೊ ( 26) ಗಂಭೀರ ಸ್ವರೂಪದ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಾವೂರ ಸಮೀಪದ ಬಡಗುಂಡಿ ಎಂಬಲ್ಲಿ ಮಂಗಳೂರಿನಿಂದ ಪುಂಜಾಲಕಟ್ಟೆ ನಯನಾಡು ಮನೆಗೆ ರಿಟ್ಜ್ ಕಾರಿನಲ್ಲಿ ಹೋಗುತ್ತಿದ್ದ ರಾಕ್ಲಿನ್ ನ ಕಾರು ಬಡಗುಂಡಿಯಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಚಿತ್ರದುರ್ಗ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ಸಾವು
Related Articles
ವಾಮದಪದವು ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಿ ಊಟ ಮುಗಿಸಿ ಅಲ್ಲಿಂದ ವಾಪಾಸು ಮಂಜೇಶ್ವರಕ್ಕೆ ಹೋಗುತ್ತಿದ್ದ ವೇಳೆ ಎರಿಟಿಗ ಕಾರು ಹಾಗೂ ರಿಟ್ಜ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ.
ಎರಿಟಿಗ ಕಾರಿನಲ್ಲಿ ಸುಮಾರು 12 ಮಂದಿ ಪ್ರಯಾಣಿಕರಿದ್ದು ಎಲ್ಲರಿಗೂ ಗಾಯವಾಗಿದೆ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಹಬೇಕಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.