Advertisement
ಬಿಬಿಎಂಪಿ ಕಸದ ಲಾರಿ ಚಾಲಕ ದಿನೇಶ್ ನಾಯ್ಕ (40) ನನ್ನು ಬಂಧಿಸಲಾಗಿದೆ. ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವ ದೇವಣ್ಣ, “ಶನಿವಾರ ಸಂಜೆ ನಾಗವಾರದಿಂದ ಹೆಗಡೆ ನಗರದ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಅದೇ ರಸ್ತೆಯಲ್ಲಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ ಹಿಂದಿನಿಂದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
Advertisement
ಬೆಂಗಳೂರು: ಪಾಲಿಕೆಯ ಎಲ್ಲ ವಾಹನ ಚಾಲಕರ ಫಿಟ್ ನೆಸ್ ಪ್ರಮಾಣ ಪತ್ರದ ತಪಾಸಣೆ ನಡೆಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೇಳಿದೆ.
ಈ ಬಗ್ಗೆ ಶನಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪಾಲಿಕೆಯ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು, ಥಣಿಸಂದ್ರದ ರೈಲ್ವೆ ಗೈಟ್ ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಂತಾಪ ಸೂಚಿಸಿದ್ದಾರೆ.
ಈ ವಾಹನ ಗುತ್ತಿಗೆದಾರರಿಗೆ ಸೇರಿದ್ದಾಗಿದೆ ಎಂದಿದ್ದಾರೆ.ಇಂತಹ ಅಪಘಾತಗಳನ್ನು ತಪ್ಪಿಸಲು ಪಾಲಿಕೆ ಕ್ರಮ ಕೈಗೊಂಡಿದೆ. ಪಾಲಿಕೆಯಿಂದ ಕಾರ್ಯನಿರ್ವಹಿಸುತ್ತಿರುವ 558 ಕಾಂಪ್ಯಾಕ್ಟ್ ವಾಹನಗಳ ಚಾಲಕರಿಗೆ ಹಂತ ಹಂತವಾಗಿ ತರಬೇತಿ ಹಮ್ಮಿಕೊಳ್ಳಲಾಗಿದೆ.
ಜತೆಗೆ ಈಗಾಗಲೇ 388 ಚಾಲಕರ ತರಬೇತಿ ಪೂರ್ಣಗೊಂಡಿದ್ದು, ಇತರ ಚಾಲಕರ ಪರವಾನಗಿ ಮತ್ತು ದೈಹಿಕ ಪರೀಕ್ಷೆ ಸೇರಿದಂತೆ ಇತರ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.