Advertisement
ಸಾರಿಗೆ ಇಲಾಖೆಯಿಂದ ಸಾರಿಗೆ ವಾಹನ ಚಾಲನಾ ಪರವಾನಿಗೆ ಪಡೆದ ಚಾಲಕರು ತತ್‌ಕ್ಷಣದಿಂದ ಫಲಾನುಭವಿಯೆಂದು ಪರಿಗಣಿಸುತ್ತಿದ್ದು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಯೋಜನೆಯಡಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆ ನೀಡಿ ನೋಂದಾಯಿಸಿಕೊಳ್ಳಬೇಕು. ಒಮ್ಮೆ ನೋಂದಣಿಯಾದ ಅನಂತರ ನೀಡಲಾದ ಗುರುತಿನ ಚೀಟಿಯು 3 ವರ್ಷಗಳವರೆಗೆ ಅಸ್ಥಿತ್ವದಲ್ಲಿರುತ್ತದೆ. ಅನಂತರ ನವೀಕರಣಕ್ಕೆ ನಿಗದಿಪಡಿಸಿದ ದಾಖಲೆಗಳನ್ನು ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಿ ನವೀಕರಿಸಿಕೊಳ್ಳಬಹುದಾಗಿದೆ.
ಅಪಘಾತದಿಂದ ಚಾಲಕರು, ನಿರ್ವಾಹಕರು, ಕ್ಲೀನರ್‌ಗಳು ಮರಣ ಹೊಂದಿದಲ್ಲಿ, ಅವರ ನಾಮನಿರ್ದೇಶಿತರಿಗೆ 5 ಲಕ್ಷ ರೂ. ಪರಿಹಾರ ಹಾಗೂ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ 2 ಲಕ್ಷ ರೂ. ವರೆಗೆ ಪರಿಹಾರ ನೀಡಲಾಗುವುದು. ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ 50,000 ರೂ. ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಹಾಗೂ 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ 1 ಲಕ್ಷ ರೂ. ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಮರುಪಾವತಿ ಪಡೆಯಬಹುದಾಗಿದೆ.
Related Articles
2018-19ನೇ ಸಾಲಿನಿಂದ ಅಪಘಾತದ ಕಾರಣ ನಿಧನ/ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000 ರೂ.ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದೆ.
Advertisement
ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾರ್ಮಿಕ ಇಲಾಖೆಯ ಕಚೇರಿ ಸಂರ್ಕಿಸಲು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟನೆ ತಿಳಿಸಿದೆ.