Advertisement

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

12:42 PM Dec 02, 2021 | Team Udayavani |

ಭಾಲ್ಕಿ : ಪುತ್ರ‌ನ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಹೋದ ದಂಪತಿಗಳು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಧನ್ನೂರ್ ತಾಂಡಾ ಬಳಿ ಬುಧವಾರ ತಡರಾತ್ರಿ ನಡೆದಿದೆ. ಈ ಮೂಲಕ ಮದುವೆಯ ಸಂಭ್ರಮದ ಖುಷಿಯಲ್ಲಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.

Advertisement

ಭಾಲ್ಕಿ ತಾಲೂಕಿನ ಮೇತಿ ಮೇಳಕುಂದಾ ಗ್ರಾಮದ ಸೂರ್ಯಕಾಂತ ಪಾಟೀಲ (50)ಮತ್ತು ಅವರ ಪತ್ನಿ ಜಯಶ್ರೀ ಪಾಟೀಲ (45) ಮೃತ ದುರ್ದೈವಿಗಳು. ಭಾಲ್ಕಿ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದ ಪಾಟೀಲ, ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಸೂರ್ಯಕಾಂತ ಪಾಟೀಲ ಅವರ ಮಗ ಸಾಯಿನಾಥ ಅವರ ಮದುವೆ ಡಿ. 26ಕ್ಕೆ ನಿಶ್ಚಯವಾಗಿದ್ದು, ಬೀದರ ನಗರದಲ್ಲಿ ಸಂಬಂಧಿಕರಿಗೆ ಮದುವೆಯ ಆಮಂತ್ರಣ ಪತ್ರಿಕೆ ನೀಡಿ ಭಾಲ್ಕಿಗೆ ವಾಪಸ್‌ ಆಗುವಾಗ ಕಾರಿನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಈಶ್ವರ ಖಂಡ್ರೆ ಹಾಗೂ ‌ಪೊಲೀಸ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next