Advertisement

ಲಾರಿ, ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ದುರ್ಮರಣ

07:54 AM Oct 21, 2017 | Team Udayavani |

ಹೊಸಪೇಟೆ: ವ್ಯಾಗನರ್‌ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಬಳ್ಳಾರಿ ಜಲ್ಲೆ ಹೊಸಪೇಟೆ ತಾಲೂಕಿನ ಪಿ.ಕೆ.ಹಳ್ಳಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

Advertisement

ಕಾರು ಚಾಲಕ ಶ್ರೀನಿವಾಸ(45), ವೆಂಕಟಮ್ಮ(46), ನಳಿನಿ(30), ಮತ್ತೂಬ್ಬ ಮಹಿಳೆ ಮೃತಪಟ್ಟ ದುರ್ದೈವಿಗಳು. ಮೃತರು ಚಿತ್ರದುರ್ಗದ ಹಿರಿಯೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.  ಸಂಬಂಧಿಕರೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅವರ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಾದಿಗನೂರು ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next