Advertisement

ಪುತ್ರಿಯ ವಿವಾಹ ಆಮಂತ್ರಣ ನೀಡಲು ತೆರಳುವ ವೇಳೆ ಅಪಘಾತವಾಗಿ ತಂದೆ ಸಾವು

11:21 AM Apr 10, 2022 | Team Udayavani |

ವಿಟ್ಲ: ಎರಡು ಕಾರುಗಳು ಪರಸ್ಪರ ಢಿಕ್ಕಿಯಾಗಿ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಭಾನುವಾರ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಾಣಿ ಸಮೀಪ ಬುಡೋಳಿಯಲ್ಲಿ ನಡೆದಿದೆ.

Advertisement

ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತ ದುರ್ದೈವಿ.

ಚಾಲಕ ಪ್ರಜ್ವಲ್ (22), ನಾರಾಯಣ, ಮಂಜುನಾಥ, ರಘುಚಂದ್ರ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರಜ್ವಲ್ ಚಲಾಯಿಸಿದ್ದು, ಲಕ್ಷ್ಮಣ ಆಚಾರಿ ಅವರು ಪುತ್ರಿಯ ವಿವಾಹ ಆಮಂತ್ರಣ ನೀಡುವ ನಿಟ್ಟಿನಲ್ಲಿ ಊರಿಗೆ ಆಗಮಿಸುತ್ತಿದ್ದರೆನ್ನಲಾಗಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲ್ಯಾಕ್‌ಮೇಲ್‌: ಕಬಾಬ್‌ ಕತೆ ಹೇಳಿ ಸಂಗತಿ ಮುಚ್ಚಿಟ್ಟ ಬಾಲಕಿ

Advertisement

ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರಿನವರಿಗೆ ಮಾಣಿ ಜಂಕ್ಷನ್ ನಲ್ಲಿ ರಸ್ತೆ ತಪ್ಪಿ ಬೆಂಗಳೂರು ಮಾರ್ಗದಲ್ಲಿ ಮುಂದುವರಿದ್ದಾರೆ. ಈ ಸಮಯ ಬುಡೋಳಿ ಎಂಬಲ್ಲಿ ಈ ಅಪಘಾತ ನಡೆದಿದೆ. ಫ್ರೆಂಡ್ಸ್ ವಿಟ್ಲ ತಂಡ ವಾಹನವನ್ನು ಸ್ಥಳದಿಂದ ತೆರವು ಮಾಡಿ ಠಾಣೆಗೆ ತಲುಪಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next