Advertisement

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಡಿಕ್ಕಿ; 3 ಸಾವು

07:12 PM Mar 23, 2017 | Sharanya Alva |

ಹಾಸನ: ಮದುವೆಗೆಂದು ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಸಂಭವಿಸಿದ್ದು, ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

Advertisement

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗೋವಿಂದರಾಜು(60ವರ್ಷ), ಶಾರದ(55ವರ್ಷ) ಹಾಗೂ ಗಂಗಮ್ಮ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟೆಂಪೋದಲ್ಲಿದ್ದ ಹಲವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next