Advertisement
ಮಂಗಳೂರಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಹಾಸನದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹಗಳು ರಸ್ತೆಗೆ ಎಸೆಯಲ್ಪಟ್ಟಿದ್ದವು.
ಕಾರಿನಲ್ಲಿದ್ದವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಿರಿಯ ಪೊಲೀಸ್ ಆಧಿಕಾತಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.