Advertisement

ಬಂಟ್ವಾಳ: ಕಾರು-ಆಟೋ ರಿಕ್ಷಾ ಢಿಕ್ಕಿಯಾದ ರಭಸಕ್ಕೆ ಆಟೋದಿಂದ ಹೊರಗೆ ಬಿದ್ದು ಮಹಿಳೆ ಸಾವು

05:46 PM Feb 06, 2022 | Team Udayavani |

ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ.

Advertisement

ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next