Advertisement

ಭೀಕರ ಅಪಘಾತ: ಜನಪ್ರಿಯ ರಿಯಾಲಿಟಿ ಶೋನ ಸ್ಪರ್ಧಿ 6 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

09:31 PM Jan 13, 2022 | Team Udayavani |

ಬೆಂಗಳೂರು: ಟಿಪ್ಪರ್ ಲಾರಿ – ದ್ವಿಚಕ್ರ ವಾಹನ ಅಪಘಾತವಾಗಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಾಜರಹಳ್ಳಿ ಬಳಿ ನಡೆದಿದೆ.

Advertisement

ಸಮನ್ವಿ(6)  ಮೃತ ದುರ್ಧೈವಿ. ಸಮನ್ವಿ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋವೊಂದರಲ್ಲಿ ಸ್ಪರ್ಧಿಯಾಗಿದ್ದಳು.

ದ್ವಿಚಕ್ರ ವಾಹನದಲ್ಲಿ ತಾಯಿ – ಮಗು ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದು ಅಪಘಾತವಾಗಿದ್ದು, ಪರಿಣಾಮ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಅಪಘಾತದಲ್ಲಿ ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹ ಕಿಮ್ಸ್ ಗೆ ರವಾನಿಸಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು  ವಶಕ್ಕೆ ಪಡೆದಿದ್ದಾರೆ.

Advertisement

ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next