Advertisement

ಅಪಘಾತ: ಭಿಕ್ಷುಕರು ಸೇರಿ ನಾಲ್ವರು ಸಾವು

10:24 AM Jan 12, 2022 | Team Udayavani |

ಬೆಂಗಳೂರು: ನಗರದಲ್ಲಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭೀಕ್ಷುಕರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಮೂರು ಅಪಘಾತದಲ್ಲಿ ಮಹಿಳಾ ಭೀಕ್ಷುಕಿ ಸೇರಿ ಮೂವರು ಮೃತಪಟ್ಟಿದ್ದಾರೆ. ಏರ್‌ಪೋರ್ಟ್‌ ರಸ್ತೆಯಲ್ಲಿಯಲಹಂಕ ನಿವಾಸಿ ಎಂ.ಕೆ ಸಿಂಗ್‌ ಮಂಗಳವಾರ ಮಧ್ಯಾಹ್ನ 1.45ಕ್ಕೆ ತಮ್ಮ ಖಾಸಗಿ ಕಾರಿನಲ್ಲಿ ಬರುತ್ತಿದ್ದಾಗ ರಸ್ತೆ ದಾಟುತ್ತಿದ್ದ ಭಿಕ್ಷುಕನಿಗೆ ಡಿಕ್ಕಿ ಹೊಡೆದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Advertisement

ಸುಮಾರು 36 ವರ್ಷದ ಭೀಕ್ಷುಕನ ಗುರುತು ಪತ್ತೆಯಾಗಿಲ್ಲ. ಪ್ರಕರಣದ ಸಂಬಂಧ ಎಂ.ಕೆ.ಸಿಂಗ್‌ ಅವರನ್ನು ಬಂಧಿಸಲಾಗಿದೆ. ಮತ್ತೂಂದು ಪ್ರಕರಣದಲ್ಲಿ ಅಪರಿಚಿತ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಭೀಕ್ಷುಕಿ(30) ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ 8.15 ರ ಸಮಯಲ್ಲಿಮಹಿಳೆ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಬರುತ್ತಿದ್ದರು ಈ ವೇಳೆ ದ್ವಿಚಕ್ರ ವಾಹನ ಸವಾರನೊಬ್ಬ ಗುದ್ದಿ ಪರಾರಿಯಾಗಿದ್ದಾನೆ. ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಮಹಿಳೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಪರಾರಿಯಾಗಿರುವ ವಾಹನ ಸವಾರನಿಗಾಗಿ ಶೋಧನಡೆಸಲಾಗುತ್ತಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಯುವಕ ದುರ್ಮರಣ: ದ್ವಿಚಕ್ರ ವಾಹನದಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಗೋಡೆಯೊಂದಕ್ಕೆ ಡಿಕ್ಕಿ ಹೊಡೆದುಕೊಂಡು ಯುವಕನೊಬ್ಬ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರುತಿನಗರ ನಿವಾಸಿ ಸಾಹಿಲ್‌ (20) ಮೃತ ಯುವಕ. ಪಾಲೆನಹಳ್ಳಿಯಲ್ಲಿ ಸಾಹಿಲ್‌ ತಂದೆವೆಲ್ಡಿಂಗ್‌ ಶಾಪ್‌ ತೆರೆದಿದ್ದು, ಸಂಜೆ ನಾಲ್ಕು ಗಂಟೆ ಸುಮಾರಿಗೆ ವೆಲ್ಡಿಂಗ್‌ ಶಾಪ್‌ಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ರಸ್ತೆ ಮಧ್ಯೆ ನಿಯಂತ್ರಣ ತಪ್ಪಿ ಅಂಗಡಿಯ ಗೋಡೆಯೊಂದಕ್ಕೆ ಹೊಡೆ ದುಕೊಂಡು, ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next