Advertisement

ಗಾಯಗೊಂಡಿದ್ದ ವ್ಯಕ್ತಿ ಸಾವು

10:38 AM Jan 15, 2022 | Team Udayavani |

ಶಿರಸಿ: ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

Advertisement

ಇಲ್ಲಿನ ಹುಲೇಕಲ್‌ ರಸ್ತೆ ಕರ್ಕೋಳ್ಳಿ ಹತ್ತಿರ ಬೈಕ್‌ ಸವಾರ ಕೃಷ್ಣ ಮರಾಠಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಪಾದಚಾರಿ ವೆಂಕಟ ಮರಾಠಿ ಎಂಬುವವರಿಗೆ ಡಿಕ್ಕಿ ಹೊಡೆದಿದ್ದ. ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ವೆಂಕಟ ಮರಾಠಿಯನ್ನು ಹುಬ್ಬಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next