Advertisement

ಕೋಟದಲ್ಲಿ ಭೀಕರ ಅಪಘಾತ: ತಾಯಿ,ಮಗ ದಾರುಣ ಸಾವು 

03:41 PM Dec 12, 2017 | Team Udayavani |

ಕುಂದಾಪುರ: ಇಲ್ಲಿನ ಕೋಟ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ  ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಗುದ್ದಿದ ಪರಿಣಾಮವಾಗಿ ಅದರಲ್ಲಿದ್ದ  ತಾಯಿ ಮಗ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 
 

Advertisement

ಮೃತರು ಬಾರ್ಕೂರು ಬೆಣ್ಣೆಕುದ್ರು ನಿವಾಸಿಗಳಾದತಾಯಿ ಗಿರಿಜಾ (52), ಮತ್ತು ಮಗ (ಅವಿನಾಶ್ (27)  ಎಂದು ತಿಳಿದು ಬಂದಿದೆ. ಗಾಯಾಳುಗಳಿಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು. 

Advertisement

ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next