Advertisement

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

01:12 AM Sep 10, 2024 | Team Udayavani |

ಸಕಲೇಶಪುರ/ನೆಲ್ಯಾಡಿ: ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಐವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ.

Advertisement

ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿಯ ಚಂದ್ರೇಗೌಡ (50) ಮೃತಪಟ್ಟವರು. ಕಾರಿನಲ್ಲಿದ್ದ ಶೈಲಾ ಹಾಗೂ ಕಿರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳಿಸಲಾಗಿದೆ ತಿಳಿದುಬಂದಿದೆ.

ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಬರುತ್ತಿದ್ದ ಕಾರುಗಳು ಒಂದನ್ನೊಂದು ಹಿಂದಿಕ್ಕುತ್ತಿದ್ದಾಗ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಢಿಕ್ಕಿ ಹೊಡೆದಿವೆ. ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next