Advertisement

ಉಡುಪಿಯ ಪೆರ್ಡೂರಿನಲ್ಲಿ ಭೀಕರ ಅಪಘಾತ ; 3 ಬಲಿ, 7 ಮಂದಿಗೆ ಗಾಯ 

11:57 AM Apr 29, 2018 | |

ಉಡುಪಿ: ತಾಲೂಕಿನ ಪೆರ್ಡೂರು ಬಳಿ ಭಾನುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು , ಮೂವರು ದಾರುಣವಾಗಿ ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಉಡುಪಿಯಲ್ಲಿ  ಮೇ 1 ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಚಿತ್ರದುರ್ಗದಿಂದ ಪೆಂಡಾಲ್‌ ಸಾಗಿಸುತ್ತಿದ್ದ  ಈಚರ್‌ ಟ್ರಕ್‌ ವಿದ್ಯುತ್‌ ಕಂಬಕ್ಕೆ ಗುದ್ದಿ ಉರುಳಿ ಬಿದ್ದಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು , 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ದಾಖಲಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next