Advertisement
ಕಲ್ಮಂಜ ಗ್ರಾಮದ ಕೇಲೆಂಗಿ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಅಶೋಕ್ ಕುಮಾರ್ (56) ಮೃತಪಟ್ಟವರು.ಅವರು ಬೆಳಗ್ಗೆ ಮನೆಯಿಂದ ಮುಂಡಾಜೆ ಹಾಲು ಉತ್ಪಾದಕರ ಸಂಘದ ಕಡೆ ತೆರಳುತ್ತಿದ್ದಾಗ ಮುಂಭಾಗದಿಂದ ಬಂದ ಸ್ಕಾರ್ಪಿಯೋ ಅಶೋಕ್ ಅವರ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಅವರನ್ನು ಕಲ್ಮಂಜದ ಮೋಹನ್ ಕುಮಾರ್ ಮತ್ತಿತರರು ಸೇರಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದರು. ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸಾಗಿಸಲು ತಯಾರಿ ನಡೆಸುತ್ತಿದ್ದ ವೇಳೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.