ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದ ತೋಟದ ಗುಡಿಸಲಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಯಮನಪ್ಪ ಲಮಾಣಿ ಎಂಬರ ಜಮೀನಿನಲ್ಲಿ ಖೇಮಪ್ಪ ಪಾಂಡಪ್ಪ ಲಮಾಣಿ ಎಂಬುವವರು ಗುಡಿಸಲು ಹಾಕಿಕೊಂಡು ವಾಸವಾಗಿದ್ದರು.
ಗುರುವಾರ ಇದ್ದಕ್ಕಿದ್ದಂತೆ ಆಕಸ್ಮಿಕ ಬೆಂಕಿ ತಗುಲಿದ್ದು, 5 ಲಕ್ಷ ರೂ. ನಗದು, 50 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, ಟಿವಿ ಸೇರಿದಂತೆ ಮನೆಯಲ್ಲಿನ ವಿವಿಧ ಮೌಲ್ಯದ ಅಪಾರ ಪ್ರಮಾಣ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಲೇ ಮುದ್ದೇಬಿಹಾಳ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೇ ಬೆಂಕಿಯ ಕೆನ್ನಾಲಿಗೆಯಿಂದ ಏಕಾಏಕಿ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ನಿಂತು ಕಂಗಾಲಾಗಿದ್ದ ಸಂತ್ರಸ್ತ ಕುಟುಂಬಕ್ಕೆ ಗ್ರಾಮಲೆಕ್ಕಾಧಿಕಾರಿ ಹರ್ಷಿತಗೌಡ ವಯಕ್ತಿಕವಾಗಿ 5 ಸಾವಿರ ರೂ. ನಗದು ಹಣದ ನೆರವು ನೀಡಿ ಮಾನವೀಯತೆ ತೋರಿದ್ದಾರೆ.