ಧಾರವಾಡ: ಇಲ್ಲಿಯ ಕೆಎಂಎಫ್ ಹಿಂದಿನ ಲಕಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಕೈಟೆಕ್ ಕಂಪನಿಯಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುಮಾರು 4.95 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿ ಅವಘಡದಲ್ಲಿ ಹಾನಿಗೊಳಗಾಗಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಇದಲ್ಲದೇ ಲಕ್ಷಾಂತರ ಮೌಲ್ಯದ ಯಂತ್ರಗಳಿಗೂ ಹಾನಿ ಆಗಿದ್ದು, ಈ ಕುರಿತು ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದ ಶಾಸಕ ಅರವಿಂದ ಬೆಲ್ಲದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
Advertisement
ನಾಗರಾಜ ಎಲಿಗಾರ ಹಾಗೂ ಕಣವಿ ಮಾಲೀಕತ್ವಕ್ಕೆ ಸೇರಿದ್ದಾಗಿದೆ. ಪ್ಲಾಸ್ಟಿಕ್ ತ್ಯಾಜ್ಯಗಳ ಉಷ್ಣಾಂಶ ಹೆಚ್ಚಾದ ಪರಿಣಾಮ ಗೋದಾಮಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ಕ್ಷಣಾರ್ಧದಲ್ಲಿ ಸಂಪೂರ್ಣ ಗೋದಾಮಿಗೆ ಹರಡಿದ್ದು, ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ತಕ್ಷಣ ಕರೆ ಮಾಡಿದ್ದರಿಂದ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.