Advertisement

ಜಮ್ಮು- ಕಾಶ್ಮೀರದಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾಧಿಕಾರಿಗಳು ಬಲಿ

10:17 AM Jul 18, 2022 | Team Udayavani |

ಜಮ್ಮು- ಕಾಶ್ಮೀರ: ಇಲ್ಲಿನ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

Advertisement

ಭಾನುವಾರ ತಡರಾತ್ರಿ ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಘಟನೆ ನಡೆದಿದ್ದು, ಇಬ್ಬರು ಸೇನಾ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಸೇನಾ ಪಿಆರ್‌ಒ ತಿಳಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಖಾಸಗಿ ಹೋಟೆಲ್ ನಲ್ಲಿರುವ ರಾಜ್ಯದ ಬಿಜೆಪಿ ಶಾಸಕರು

ಸೇನಾ ಕ್ಯಾಪ್ಟನ್ ಮತ್ತು ನೈಬ್-ಸುಬೇದಾರ್ (ಜೆಸಿಒ) ಅವರನ್ನು ತಕ್ಷಣ ಹೆಲಿಕಾಪ್ಟರ್‌ನಲ್ಲಿ ಚಿಕಿತ್ಸೆಗಾಗಿ ಉಧಮ್‌ಪುರಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ವೇಳೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next