Advertisement

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ; ರಾಜ್ಯ ಸರಕಾರಕ್ಕೆ ಹೈಕೋರ್ಟ್‌ನಿಂದ ತುರ್ತು ನೋಟಿಸ್‌

11:27 PM Feb 09, 2022 | Team Udayavani |

ಬೆಂಗಳೂರು: ಅನುದಾನ ರಹಿತ ಖಾಸಗಿ ಶಾಲೆಗಳ ಮಾನ್ಯತೆ ಪ್ರತೀ ವರ್ಷ ನವೀಕರಿಸಲು ಬಲವಂತಪಡಿಸುತ್ತಿರುವ ವಿಚಾರ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತಂತೆ ನೋಂದಾಯಿತ ಅನು ದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ರುಪ್ಸಾ) ಮತ್ತು ಬೆಂಗಳೂರಿನ ಗುರು ಸಿದ್ಧಾರ್ಥ್ ಶೈಕ್ಷಣಿಕ ಟ್ರಸ್ಟ್‌ ಹಾಗೂ ರಾಜ್ಯದ ಇತರ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ತಕರಾರು ಅರ್ಜಿಗಳು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.

ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯ ಪೀಠ, ಪ್ರತಿವಾದಿಗಳಾದ ರಾಜ್ಯ ಶಿಕ್ಷಣ ಇಲಾಖೆ ಕಾರ್ಯ ದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ತುರ್ತು ನೋಟಿಸ್‌ ಜಾರಿ ಮಾಡಿತು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಶಾಲಾ ಮಾನ್ಯತೆಯ ವಾರ್ಷಿಕ ನವೀಕರಣಕ್ಕೆ ಬಲ ವಂತಪಡಿಸದೆ ಅರ್ಜಿದಾರರ ಶಾಲೆಗಳ ಅರ್ಹ ಎಸೆಸೆಲ್ಸಿ ವಿದ್ಯಾರ್ಥಿಗಳಿಂದ ವಾರ್ಷಿಕ ಪರೀಕ್ಷಾ ನೋಂದಣಿಗೆ ಅರ್ಜಿ ಸ್ವೀಕರಿಸಬೇಕು. ಆದರೆ ನ್ಯಾಯಾಲಯದ ಅನುಮತಿ ಪಡೆಯದೆ ಪರೀಕ್ಷಾ ಫ‌ಲಿತಾಂಶ ಪ್ರಕಟಿಸಬಾರದು ಎಂದು ನಿರ್ದೇಶಿಸಿ ಇದೇ ವೇಳೆ ನ್ಯಾಯಪೀಠ ಮಧ್ಯಾಂತರ ಆದೇಶ ಮಾಡಿದೆ.

ಇದನ್ನೂ ಓದಿ:ಶಾಂತಿ-ಸೌಹಾರ್ದ ಕಾಪಾಡಿ: ರಣದೀಪ್‌ಸಿಂಗ್‌ ಸುರ್ಜೇವಾಲಾ ಮನವಿ

Advertisement

ಅರ್ಜಿದಾರರ ಪರ ಹಿರಿಯ ವಕೀಲ ಎಸ್‌. ಬಸವರಾಜು ವಾದ ಮಂಡಿಸಿ, ಕರ್ನಾಟಕ ಶಿಕ್ಷಣ ಕಾಯ್ದೆ ಪ್ರಕಾರ 10 ವರ್ಷಗಳಿಗೊಮ್ಮೆ ಶಾಲಾ ಮಾನ್ಯತೆ ನವೀಕರಿಸಬೇಕಿದೆ. ಆದರೆ, ರಾಜ್ಯ ಸರಕಾರವು ಪ್ರತಿ ವರ್ಷವೂ ಮಾನ್ಯತೆ ನವೀಕರಣ ಮಾಡುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸೂಚಿಸುತ್ತಿದೆ. ಅದರಂತೆ 2021ರ ಡಿ. 12ರಂದು ಸುತೋಲೆ ಹೊರಡಿಸಿ, 2022ರ ಆಗಸ್ಟ್‌ 31ರೊಳಗೆ ಶಾಲಾ ಮಾನ್ಯತೆ ನವೀಕರಿಸುವಂತೆ ಸರಕಾರ ಸೂಚನೆ ನೀಡಿದೆ ಎಂದು ವಿವರಿಸಿದರು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ರ ಜ. 17ರಂದು ಸುತ್ತೋಲೆ ಹೊರಡಿಸಿ, ಕೊನೆಯ ದಿನಾಂಕ ನಿಗದಿಪಡಿಸಿ ಪರೀಕ್ಷೆಗೆ ಕಡ್ಡಾಯವಾಗಿ ನೋಂದಣಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ ಅದರಂತೆ ಶಾಲಾ ಮಾನ್ಯತೆ ನವೀಕರಿಸಿಕೊಳ್ಳದಿದ್ದರೆ ಪ್ರಕ್ರಿಯೆ ಮುಂದುವರಿಯುವುದಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

Advertisement

Udayavani is now on Telegram. Click here to join our channel and stay updated with the latest news.

Next