Advertisement

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

08:39 PM Jul 24, 2019 | sudhir |

ಬಜಪೆ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಸೋಮಶೇಖರ(45) ನನ್ನು ಬಜಪೆ ಪೊಲೀಸರು ಬಂಧಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.

Advertisement

ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಾಡಿ ಅಲಕಟ್ಟೆಯವನಾದ ಸೋಮಲಿಂಗಪ್ಪ ಅಲಿಯಾಸ್ ಸೋಮಶೇಖರ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಮಾನ್ಯ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು,

ಪ್ರಕರಣಕ್ಕೆ ಸಂಬಂಧಿಸಿ ಬಜಪೆ ಪೊಲೀಸ್ ಉಪನಿರೀಕ್ಷಕರಾದ ಸತೀಶ ರವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ಮಂಗಳೂರಿನ ಕುಂಜತ್ ಬೈಲ್ ನಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಾರ್ಯಾಚರಣೆಯಲ್ಲಿ ಸಿಬ್ಬಂದಿ ರಾಮ ನಾಯ್ಕ, ತಿರುಪತಿ ಮೋಹನ್ ಭಾಗವಹಿಸಿರುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next