ಮಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ,ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುನಾಝ್ ಅಹಮ್ಮದ್(30) ಬಂಧಿತ ಆರೋಪಿ.
ಘಟನೆ ಹಿನ್ನೆಲೆ: ಜು.27 ರಂದು ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯೊಂದಿಗೆ ಬಂದಿದ್ದಳು. ಈ ವೇಳೆ ಮುನಾಝ್ ಅಹಮ್ಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿದ ಮೇಲೆ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಕೃತ್ಯದ ವೀಡಿಯೋ ಮಾಡಿಕೊಂಡಿದ್ದ ಆರೋಪಿ ಬಳಿಕ ಅದನ್ನು ತೋರಿಸಿ ಕಿರುಕುಳ ನೀಡುತ್ತಿದ್ದ.
ಈ ಬಗ್ಗೆ ವಿದ್ಯಾರ್ಥಿನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಳು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮುನಾಝ್ ಅಹಮ್ಮದ್ ಮೀನು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿನಿ ಕೊಟ್ಟ ದೂರಿನ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.