Advertisement

ಮಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ವಿಡಿಯೋ ತೋರಿಸಿ ಕಿರುಕುಳ: ಆರೋಪಿ ಬಂಧನ

01:48 PM Aug 01, 2022 | Team Udayavani |

ಮಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ,ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಮುನಾಝ್ ಅಹಮ್ಮದ್(30) ಬಂಧಿತ ಆರೋಪಿ.

ಘಟನೆ ಹಿನ್ನೆಲೆ:  ಜು.27 ರಂದು‌ ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯೊಂದಿಗೆ ಬಂದಿದ್ದಳು. ಈ ವೇಳೆ ಮುನಾಝ್ ಅಹಮ್ಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿದ ಮೇಲೆ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಕೃತ್ಯದ ವೀಡಿಯೋ ಮಾಡಿಕೊಂಡಿದ್ದ ಆರೋಪಿ ಬಳಿಕ ಅದನ್ನು ತೋರಿಸಿ ಕಿರುಕುಳ ನೀಡುತ್ತಿದ್ದ.

ಈ ಬಗ್ಗೆ ವಿದ್ಯಾರ್ಥಿನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಳು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮುನಾಝ್ ಅಹಮ್ಮದ್ ಮೀನು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿನಿ ಕೊಟ್ಟ ದೂರಿನ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next