Advertisement

ದೇಗುಲಗಳಲ್ಲಿ ತಾಳಿ, ಚಿನ್ನ ಕದಿಯುತ್ತಿದ್ದವ ಬಂಧನ 

12:34 PM Sep 11, 2022 | Team Udayavani |

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ಮಾಡಿಕೊಂಡಿದ್ದ ಸಾಲ ತೀರಿಸಲು ದೇವಸ್ಥಾನಗಳಿಗೆ ನುಗ್ಗಿ ದೇವಿಯ ಮೈಮೇಲಿದ್ದ ಚಿನ್ನದ ತಾಳಿ ಹಾಗೂ ಇತರೆ ಚಿನ್ನಾಭರಣ ಕಳವು ಮಾಡುತ್ತಿದ್ದ ಕಳ್ಳನನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ.

Advertisement

ಮಂಡ್ಯ ಜಿಲ್ಲೆಯ ಕಲ್ಲೇಶ್‌(35) ಬಂಧಿತ. ಈತನಿಂದ 30 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕೃಷಿಕನಾಗಿರುವ ಆರೋಪಿ, ಕೋವಿಡ್‌ ಸಂದರ್ಭದಲ್ಲಿ ನಷ್ಟ ಹೊಂದಿ ಎರಡು ವರ್ಷಗಳಿಂದ ದೇವಾಲಯಗಳಿಗೆ ನುಗ್ಗಿ ತಾಳಿ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ. ಈ ಚಿನ್ನಾಭರಣ ಮಾರಾಟ ಮಾಡಿ ಸಾಲ ತೀರಿಸಿಕೊಂಡಿದ್ದಾನೆ. ಆದರೂ ಮತ್ತೆ ಅದೇ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದನು. ಇತ್ತೀಚೆಗೆ ಠಾಣೆ ವ್ಯಾಪ್ತಿಯ ಕನ್ನಿಕಾಪರಮೇಶ್ವರಿ ದೇವಾಲಯಕ್ಕೆ ನುಗ್ಗಿ ದೇವಿಯ ತಾಳಿ ಸರ ಕಳವು ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಗಮನಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಗಮನ ಬೇರೆಡೆ ಸೆಳೆದು ಕೃತ್ಯ: ಪೂಜೆ ಮಾಡಿಸುವ ಸೋಗಿನಲ್ಲಿ ಭಕ್ತರು ಕಡಿಮೆ ಸಂಖ್ಯೆಯಲ್ಲಿರುವ ದೇವಾಲಯಗಳಿಗೆ ಹೋಗುತ್ತಿದ್ದ ಆರೋಪಿ, ಪುರೋಹಿತರು ಆರತಿ ಕೊಟ್ಟು ಬೇರೆ ಕೆಲಸಕ್ಕೆ ಮುಂದಾಗುತ್ತಿದ್ದಂತೆ ಚಿನ್ನಾಭರಣ ಕಳವು ಮಾಡುತ್ತಿದ್ದ. ಈತನ ಬಂಧನಿಂದ ಶ್ರೀರಾಮಪುರ, ಮಾಗಡಿ ರಸ್ತೆ, ಪೀಣ್ಯ ಹಾಗೂ ಹನುಮಂತನಗರ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ, ಒಂದು ವರ್ಷದ ಹಿಂದೆ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಇದೇ ಮಾದರಿಯ ಕೃತ್ಯದಲ್ಲಿ ಬಂಧಿಸಿದ್ದರು ಎಂದು ಪೊಲೀಸರು ಹೇಳಿದರು.

ಶ್ರೀರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next