Advertisement

ಎಟಿಎಂನಲ್ಲಿ ಜನರ ಗಮನ ಬೇರೆ ಕಡೆ ಸೆಳೆದು ವಂಚನೆ ಮಾಡುತ್ತಿದ್ದ ಆರೋಪಿಯ ಬಂಧನ

07:17 PM Oct 16, 2022 | Team Udayavani |

ಚಿಕ್ಕಬಳ್ಳಾಪುರ: ಎಟಿಎಂಗಳಲ್ಲಿ ಸಾರ್ವಜನಿಕರ ಗಮನ ಬೇರೆಯಡೆ ಸೆಳೆದು ಹಣ ಡ್ರಾ ಮಾಡಿ ನಯವಾಗಿ ವಂಚನೆ ಮಾಡುತ್ತಿದ್ದ ಅಂತರ್ ಜಿಲ್ಲಾ ವಂಚಕನನ್ನು ಗ್ರಾಮಾಂತರ ಪೊಲೀಸರು ಬಂಧಿಸುವುದರಲ್ಲಿ ಯಶಸ್ವಿಯಗಿದ್ದಾರೆ.

Advertisement

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹುಡ್ಕೋ ಕಾಲೋನಿಯ ನಿವಾಸಿ ಎನ್.ಸಾಗರ್ ಬಿನ್ ಜೆ. ನಾರಾಯಣಮೂರ್ತಿ (29) ಬಂಧಿತ ಆರೋಪಿ.

ಸಾರ್ವಜನಿಕರಿಂದ ಖಚಿತ ಮಾಹಿತಿ ಮೇರೆಗೆ ನಾಯನಹಳ್ಳಿ ಗ್ರಾಮದ ಕೆನರಾ ಬ್ಯಾಂಕ್ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ಆರೋಪಿಯೂ ಶಿವಮೊಗ್ಗ, ಯಾದಗಿರಿ, ಕೆ.ಆರ್. ನಗರ ಕುಣಿಗಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ಎಟಿಎಂ ಕೇಂದ್ರಗಳ ಬಳಿ ಸಾರ್ವಜನಿಕರ ಗಮನವನ್ನು ಬೇರೆ ಕಡೆ ಸೆಳೆದು ಅವರ ಎಟಿಎಂ ಕಾರ್ಡ್‍ಗಳನ್ನು ಮೋಸದಿಂದ ಪಡೆದುಕೊಂಡು ಹಣ ಡ್ರಾ ಮಾಡಿಕೊಂಡಿರುವ ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುತ್ತದೆ.

ಇದಲ್ಲದೆ ಗೌರಿಬಿದನೂರು ನಗರ, ತುಮಕೂರು ಜಿಲ್ಲೆಯ ಗುಬ್ಬಿ, ಶಿರಾ ಹಾಗೂ ಐಜೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎಟಿಎಂ ಕೇಂದ್ರಗಳ ಬಳಿ ಸಾರ್ವಜನಿಕರಿಗೆ ಮೋಸ ಮಾಡಿರುವುದಾಗಿ ಅರೋಪಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ 1 ಲಕ್ಷ 45 ಸಾವಿರ ನಗದು ಹಾಗೂ ಕೆನರಾ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಬ್ಯಾಂಕ್‍ಗಳ ಎಟಿಎಂ ಕಾರ್ಡ್‍ಗಳನ್ನು ವಶಪಡಿಸಲಾಗಿದೆ  ಚಿಕ್ಕಬಳ್ಳಾಪುರ ಉಪವಿಭಾಗದ ಡಿವೈಎಸ್‍ಪಿ ವಿ.ಕೆ. ವಾಸುದೇವ್ ಹಾಗೂ ಸಿಪಿಐ ರಾಜು ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ಕೆ.ಪ್ರದೀಪ್ ಪೂಜಾರಿ ಅವರ ನೇತೃತ್ವದಲ್ಲಿ ಮತ್ತು ಸಿಬ್ಬಂದಿಯರಾದ ರಾಜೇಶ್,ರವಿಕುಮಾರ್,ವಿ.ಮುರಳಿ,ವಿಜಯಕುಮಾರ್ ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಅವರು ಶ್ಲಾಘನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next