ಬೆಂಗಳೂರು: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಅತ್ಯಾಚಾರ ಎಸೆದು ಕೊಲೆಗೈದ 26 ವರ್ಷದ ಯುವಕನನ್ನು ಬಂಧಿಸಲಾಗಿದೆ.
ಗಾರ್ಮೇಂಟ್ಸ್‌ನಲ್ಲಿ ಉದ್ಯೋಗಿ ಆಗಿರುವ ಪೋಷಕರ ಜತೆ ಬಾಲಕಿ ವಾಸವಿದ್ದಳು. ಸೋಮವಾರ ಮಧ್ಯಾಹ್ನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ, ಅಳುತ್ತಿದ್ದ ಬಾಲಕಿ ತಲೆಗೆ ಬಲವಾದ ಆಯುಧದಿಂದ ಹೊಡೆದು ಕೊಂದು ಪರಾರಿಯಾಗಿದ್ದ. ಬಾಲಕಿಯ ಪೋಷಕರು ನೀಡಿದ್ದ ದೂರು ಆಧರಿಸಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.