Advertisement

ಅಪಹರಣ, ಅತ್ಯಾಚಾರ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

11:37 PM Mar 20, 2023 | Team Udayavani |

ಮಂಗಳೂರು: ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2008ರಲ್ಲಿ ನಡೆದ ಯುವತಿಯ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಅನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

Advertisement

ಮೂಲತಃ ಉತ್ತರ ಕನ್ನಡ ಜಿಲ್ಲೆ ಶಿರಸಿ ಇಸಳೂರಿನ ವೆಂಕಟೇಶ ರಾಮ ಬೋವಿ ಬಂಧಿತ ಆರೋಪಿ. ಈತನಿಗೆ 2009ರಲ್ಲಿ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಮತ್ತು 4,000 ರೂ. ದಂಡ ವಿಧಿಸಿತ್ತು. ಆತ ಬೆಳಗಾವಿ ಕಾರಾಗೃಹದಲ್ಲಿದ್ದ. 2011ರ ಜನವರಿಯಲ್ಲಿ ಉತ್ಛ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಅನಂತರ ಉತ್ಛ ನ್ಯಾಯಾಲಯವು ಮೇಲ್ಮನವಿಯ ವಿಚಾರಣೆ ನಡೆಸಿ ಕೆಳ ನ್ಯಾಯಾಲಯದ ತೀರ್ಪು ಎತ್ತಿ ಹಿಡಿದು ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶ ನೀಡಿತ್ತು. ಆದರೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ.

ಮಂಗಳೂರು ಪೊಲೀಸ್‌ ಆಯುಕ್ತರ ಆದೇಶದ ಮೇರೆಗೆ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ಮನೋಜ್‌ ಕುಮಾರ್‌ ನಾಯ್ಕ ಅವರ ನಿರ್ದೇಶನದಂತೆ ಮಾ. 15ರಂದು ಕಾವೂರು ಠಾಣಾ ಪೊಲೀಸ್‌ ನಿರೀಕ್ಷಕ ಗುರುರಾಜ್‌ ಪೊಲೀಸ್‌ ಉಪನಿರೀಕ್ಷಕರಾದ ರೇವಣ್ಣ ಸಿದ್ಧಪ್ಪ, ರಘುನಾಯ್ಕ ಅವರ ಮಾರ್ಗದರ್ಶನದಂತೆ ಹೆಡ್‌ಕಾನ್‌ಸ್ಟೆಬಲ್‌ ಬಾಲಕೃಷ್ಣ, ಕಾನ್‌ಸ್ಟೆಬಲ್‌ ಸುರೇಶ್‌ ಕೊಳ್ಳಿ, ಶ್ರೀಧರ್‌ ವಿ. ಅವರ ತಂಡ ಆರೋಪಿಯನ್ನು ಶಿರಸಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್‌ ಆಯುಕ್ತರ ಕಚೇರಿಯ ಕಂಪ್ಯೂಟರ್‌ ವಿಭಾಗದ ಮನೋಜ್‌ ಅವರು ಸಹಕರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next