Advertisement

Mangaluru ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

09:18 PM Jul 29, 2023 | Team Udayavani |

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಉಳ್ಳಾಲ ಪೇಟೆಯ ಮಹಮ್ಮದ್‌ ಶಾಫಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಬಾಲಕಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಆಕೆಗೆ ಆರೋಪಿ ಮಹಮ್ಮದ್‌ ಶಾಫಿಯ ಪರಿಚಯವಿತ್ತು. ದಾರಿಯಲ್ಲಿ ಕಾಣ ಸಿಕ್ಕಿದಾಗ ಮಾತನಾಡುತ್ತಿದ್ದ. ಕಳೆದ ಜನವರಿಯಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ಆಕೆಯ ಮನೆಗೆ ಬಂದು ಅತ್ಯಾಚಾರವೆಸಗಿದ್ದ. ಅನಂತರವೂ ಅತ್ಯಾಚಾರವೆಸಗಿದ್ದ. ಇದರಿಂದಾಗಿ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು ಪೋಕ್ಸೋ ಕಾಯ್ದೆಯಡಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next