Advertisement

Mangaluru ಎಂಡಿಎಂಎ ಡ್ರಗ್ಸ್‌ ಸಹಿತ ಆರೋಪಿಯ ಬಂಧನ

09:36 PM Aug 08, 2023 | Team Udayavani |

ಮಂಗಳೂರು: ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಡ್ರಗ್ಸ್‌ ಮಾರಾಟ ಮಾಡಲು ಹೋಗುತ್ತಿದ್ದ ಉಪ್ಪಳದ ಮೊಹಮ್ಮದ್‌ ರಫೀಕ್‌ ಬಿ. (40) ಎಂಬಾತನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Advertisement

ಈತ ಬೆಳಗ್ಗೆ ತಲಪಾಡಿ ಕೆ.ಸಿ.ರೋಡ್‌ನ‌ ರಾಷ್ಟ್ರೀಯ ಹೆದ್ದಾರಿ ಬದಿಯ ಸರ್ವೀಸ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಬಂಧಿಸಿದ್ದಾರೆ. ಈತನಿಂದ 50 ಗ್ರಾಂ ಎಂಡಿಎಂಎ, ಡಿಜಿಟಲ್‌ ತೂಕಮಾಪನ, 1 ಮೊಬೈಲ್‌ ಪೋನ್‌, 8,000 ರೂ. ನಗದು ಸೇರಿದಂತೆ ಒಟ್ಟು 2,68,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಎಂಡಿಎಂಎ ಡ್ರಗ್ಸ್‌ನ್ನು ಆರೋಪಿ ಬೆಂಗಳೂರಿನಿಂದ ಖರೀದಿಸಿಕೊಂಡು ಬಂದಿದ್ದ. ಈ ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್‌ ನಿರೀಕ್ಷಕ ಶ್ಯಾಮ್‌ ಸುಂದರ್‌ ಎಚ್‌.ಎಂ, ಪಿಎಸ್‌ಐಯವರಾದ ರಾಜೇಂದ್ರ ಬಿ., ಸುದೀಪ್‌ ಎಂ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಬಂದಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next