Advertisement

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು?

12:22 PM Aug 29, 2021 | Team Udayavani |

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಕುರಿತು ದೂರು ದಾಖಲಾಗಿದೆ. ಸದರಿ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದ ಆರೋಪಿ ಮೃತಪಟ್ಟ ಘಟನೆ ಜರುಗಿದೆ.

Advertisement

ದೂರು ಸ್ವೀಕರಿದ್ದ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆ ತಂದಿದ್ದರು ಎನ್ನಲಾಗಿದೆ. ಪೊಲೀಸರ ವಶದಲ್ಲಿದ್ದ ಆರೋಪಿ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಮೃತ ಆರೋಪಿಯನ್ನು ಯಂಕಂಚಿ ಗ್ರಾಮದ ದೇವೇಂದ್ರ ಭೀಮರಾಯ ಸಂಗೋಗಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ರಾತ್ರೋರಾತ್ರಿ ಬಸ್ ನಿಲ್ದಾಣವನ್ನೇ ಕದ್ದೊಯ್ದ ಕಳ್ಳರು!

ಸದರಿ ಆರೋಪಿ ಡಾಬಾ ಮಾಲೀಕನಾಗುದ್ದು, ತನ್ನ ಡಾಬಾದಲ್ಲಿ ಕಾರ್ಮಿಕನ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಆ.23 ಹಾಗೂ 24 ರಂದು ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ. ಅಲ್ಲದೇ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾಗಿ ಸಂತ್ರಸ್ತ ಬಾಲೆಯ ತಂದೆ ಸಿಂದಗಿ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

ದೇವೇಂದ್ರನ ಅನುಮಾನಾಸ್ಪದ ಸಾವಿನ ಕುರಿತು ಪೊಲೀಸರು ಈ ವರೆಗೆ ಖಚಿತವಾಗಿ ಏನನ್ನೂ ಹೇಳಿಲ್ಲ.

ಶವವನ್ನು ವಿಜಯಪುರ ಸರ್ಕಾರಿ ಜಿಲ್ಲಾ ಅಸ್ಪತ್ರೆಗೆ ಸಾಗಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು, ಸಾರ್ವಜನಿಕರಿಗೆ, ಮಾಧ್ಯಮ ಪ್ರತಿನಿಧಿಗಳಿಗೆ ಶವ ಇರುವ ಆಸ್ಪತ್ರೆಯ ಪ್ರದೇಶ ಪ್ರವೇಶ ನಿರ್ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next