Advertisement

ಸಿಂದಗಿ ಅಪ್ರಾಪ್ತೆ ಅತ್ಯಾಚಾರ ಆರೋಪಿ ಸಾವಿನ ಪ್ರಕರಣ: ಸಿಐಡಿ ತನಿಖೆಗೆ ಶಿಫಾರಸು

01:40 PM Aug 29, 2021 | Team Udayavani |

ವಿಜಯಪುರ: ಸಿಂದಗಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆ ಅತ್ಯಾಚಾರ ಆರೋಪಿ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಶಿಫಾರಸು ಮಾಡಲಾಗಿದೆ.

Advertisement

ಪ್ರಕರಣದ ಕುರಿತು ಮಾಧ್ಯಮಗಳಿಗೆ ವಿವರ ನೀಡಿರುವ ಎಸ್ಪಿ ಆನಂದಕುಮಾರ, ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಕುರಿತು ಆರೋಪಿ ದೇವೇಂದ್ರ ಸಂಗೋಗಿ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿಯಲ್ಲಿ ದೂರು ದಾಖಲಾಗಿತ್ತು.

ಸದರಿ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಶನಿವಾರ ತಡರಾತ್ರಿ ಠಾಣೆಗೆ ಕರೆ ತಂದಿದ್ದರು. ಭಾನುವಾರ ಬೆಳಿಗ್ಗೆ ಶೌಚಾಲಯಕ್ಕೆ ಹೋದಾಗ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವಿವರಿಸಿದರು.

ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು?

ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಹೀಗಾಗಿ ಸದರಿ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿ ತನಿಖಾ ಸಂಸ್ಥೆಗೆ ವಹಿಸಲು ಶಿಫಾರಸು ಮಾಡಲಾಗುತ್ತದೆ ಎಂದು ಎಸ್ಪಿ  ವಿವರಿಸಿದರು.

Advertisement

ಇದಲ್ಲದೇ ಮೃತನ ಪತ್ನಿ, ತಾಯಿ ಸೇರಿದಂತೆ ಕುಟುಂಬದ ಸದಸ್ಯರು ಸಿಂದಗಿ ಪೊಲೀಸ್ ಠಾಣೆ ಎದುರು ಧರಣಿ ಆರಂಭಿಸಿದ್ದಾರೆ. ಇಂಥ ಪ್ರಕರಣದಲ್ಲಿ ಇದೆಲ್ಲ ಸಾಮಾನ್ಯ. ಧರಣಿ ನಿರತರು ಕೂಡಲೇ ಪ್ರತಿಭಟನೆ ಬಿಡಬೇಕು. ಪ್ರಕರಣದ ಸಮಗ್ರ ತನಿಖೆ ನಡೆಸಲು ಮುಕ್ತ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next