Advertisement

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

06:54 PM Apr 29, 2024 | Team Udayavani |

ಗದಗ: ನಗರದಲ್ಲಿ ನಡೆದ ನಾಲ್ವರ ಬರ್ಬರ ಹತ್ಯೆ ಪ್ರಕರಣದ 2ನೇ ಆರೋಪಿ ಫೈರೋಜ್ ನಿಸಾರ್ ಅಹ್ಮದ್ ಖಾಜಿ ಪೊಲೀಸರ ಮೇಲೆ ಹಲ್ಲೆ ನಡೆಸಿ ದಾರ್ಷ್ಟ್ಯ ಮೆರೆದಿದ್ದಾನೆ.

Advertisement

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಮೂತ್ರವಿಸರ್ಜನೆ ನೆಪ ಹೇಳಿದಾಗ ಪೊಲೀಸ್ ವಾಹನ ನಿಲ್ಲಿಸಲಾಗಿದೆ. ಈ ವೇಳೆ ಗದಗ ಗ್ರಾಮೀಣ ಠಾಣೆ ಪಿಎಸ್ಐ ಶಿವಾನಂದ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ಮಾಡಿದ್ದಾನೆ. ಅಪರಾಧ ಕೃತ್ಯಕ್ಕೆ ಉಪಯೋಗಿಸಿದ್ದ ಮೊಬೈಲ್ ಗಳನ್ನು ಎಸೆದು ಸಾಕ್ಷಿ ನಾಶ ಮಾಡಲು ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ಆರೋಪಿ ಫೈರೋಜ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಶಲವಡಿ-ನರಗುಂದ ಮಾರ್ಗಮಧ್ಯೆ ಘಟನೆ ನಡೆದಿದ್ದು ಗಾಯಗೊಂಡ ಫೈರೋಜ್ ನನ್ನ ನರಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next